Monday, May 19, 2025
Homeಉತ್ತರ ಕರ್ನಾಟಕಬೆಳಗಾವಿಯಲ್ಲಮ್ಮದೇವಿ ಸನ್ನಿಧಿಗೆ ಭಕ್ತರ ದಂಡು

ಯಲ್ಲಮ್ಮದೇವಿ ಸನ್ನಿಧಿಗೆ ಭಕ್ತರ ದಂಡು

ಬೆಳಗಾವಿ: ಉಗರಗೋಳ ಸುಕ್ಷೇತ್ರ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ಸೋಮವಾರದಿಂದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮೊದಲ ದಿನವೇ ಭಕ್ತರ ದಂಡು ಹರಿದುಬಂತು.

ಕೊರೊನಾ ಹರಡುವಿಕೆ ತಗ್ಗಿಸುವ ನಿಟ್ಟಿನಲ್ಲಿ ಜ.6ರಿಂದ ದೇವಿ ದರ್ಶನಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು. ಈಗ ನಿರ್ಬಂದ ಸಡಿಲಿಸಿದ್ದರಿಂದ ಭಕ್ತರಲ್ಲಿ ಹರ್ಷ ಮೂಡಿದೆ. ಅವರು ಶ್ರದ್ಧಾ-ಭಕ್ತಿಯಿಂದ ಯಲ್ಲಮ್ಮನ ಸನ್ನಿಧಿಯತ್ತ ಹೆಜ್ಜೆ ಹಾಕುತ್ತಿದ್ದಾರೆ. ‘ಉಧೋ ಉಧೋ ಯಲ್ಲಮ್ಮ ದೇವಿ ನಿನ್ಹಾಲ್ಕ ಉಧೋ’ ಎಂಬ ಜೈಕಾರ ಮುಗಿಲು ಮುಟ್ಟಿವೆ. ಏಳುಕೊಳ್ಳದ ನಾಡಿನಲ್ಲಿ ಭಕ್ತಿಯ ಹೊಳೆ ಹರಿಯುತ್ತಿದ್ದು, ಹಬ್ಬದ ಸಂಭ್ರಮ ಮನೆಮಾಡಿದೆ. ಅಗತ್ಯ ಸುರಕ್ಷತಾ ಕ್ರಮ ಅನುಸರಿಸಿ ದರ್ಶನಕ್ಕೆ ಅವಕಾಶ ಕಲ್ಪಿಸಲು ಕ್ರಮ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

‘ಕೋವಿಡ್ ಹಾವಳಿ ತಗ್ಗಿದ ಕಾರಣ ಜಿಲ್ಲಾಡಳಿತ ಆದೇಶದ ಮೇರೆಗೆ ದೇವಸ್ಥಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಅನುಮತಿ ನೀಡಲಾಗಿದೆ. ಹೊಸ ಮಾರ್ಗಸೂಚಿ ಅನ್ವಯ, ಏಕಕಾಲಕ್ಕೆ ಗರಿಷ್ಠ 50 ಭಕ್ತರಿಗಷ್ಟೇ ದರ್ಶನಕ್ಕೆ ಅವಕಾಶ ಇರಲಿದೆ. ಬರುವವರು ಕಡ್ಡಾಯವಾಗಿ ಎರಡೂ ಡೋಸ್ ಕೋವಿಡ ಲಸಿಕೆ ಪಡೆದಿರಬೇಕು. ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿ ಪಾಲಿಸಬೇಕು. ಲಸಿಕೆ ಪಡೆದ ದಾಖಲೆ ಕಡ್ಡಾಯವಾಗಿ ತರಬೇಕು’ ಎಂದು ಯಲ್ಲಮ್ಮದೇವಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ ಕೋರಿದರು.