Monday, May 19, 2025
Homeಕರಾವಳಿ ಕರ್ನಾಟಕಉಡುಪಿಹಿಜಾಬ್ ವಿದ್ಯಾರ್ಥಿನಿಯ ಪೋಷಕರ ಹೋಟೆಲ್ ಮೇಲೆ ದಾಳಿ: ಸಹೋದರನಿಗೆ ಹಲ್ಲೆ

ಹಿಜಾಬ್ ವಿದ್ಯಾರ್ಥಿನಿಯ ಪೋಷಕರ ಹೋಟೆಲ್ ಮೇಲೆ ದಾಳಿ: ಸಹೋದರನಿಗೆ ಹಲ್ಲೆ

ಉಡುಪಿ: ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್‌ಗಾಗಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿನಿ ಹಾಜ್ರಾ ಶಿಫಾ ಅವರ ಪೋಷಕರು ನಡೆಸುತ್ತಿರುವ ಮಲ್ಪೆಯ ಬಿಸ್ಮಿಲ್ಲ ಹೋಟೆಲ್ ಮೇಲೆ ಸೋಮವಾರ ರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.
ದಾಳಿಯಲ್ಲಿ ಹಾಜ್ರಾ ಸಹೋದರ ಸೈಫ್ ಮೇಲೆ ಹಲ್ಲೆ ನಡೆದಿದ್ದು
ಅವರನ್ನು ಉಡುಪಿಯ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ಹೋಟೆಲ್‌ನ ಕಿಟಕಿ ಗಾಜುಗಳನ್ನು ಒಡೆದು ಹಾಕಲಾಗಿದೆ‌
ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.