ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಸೋಮವಾರ ಮಾಜಿ ಸೈನಿಕನನ್ನು ಬಂಧಿಸಿದ್ದಾರೆ.
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಸರೂರ ಗ್ರಾಮದ ವಿಶ್ವನಾಥ ತಿಮ್ಮಪ್ಪ ಮಾನೆ ಬಂಧಿತ ಆರೋಪಿ.
ಕಲಬುರಗಿಯ ನೊಬೆಲ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಬ್ಲೂಟೂಥ್ ಉಪಕರಣ ಬಳಸಿದ್ದ ಬಗ್ಗೆ ಸಿಐಡಿ ಅಧಿಕಾರಿಗಳು ಮಾಹಿತಿ ಪಡೆದಿದ್ದರು. ಈಗಾಗಲೇ ಬಂಧನದಲ್ಲಿರುವ ಪ್ರಕರಣದ ಪ್ರಮುಖ ಕಿಂಗ್ ಪಿನ್ ಆರ್.ಡಿ. ಪಾಟೀಲ ಅಕ್ರಮ ಎಸಗಲು ನೆರವಾಗಿದ್ದರು ಎಂದು ಮೂಲಗಳು ತಿಳಿಸಿವೆ.
ವಿಶ್ವನಾಥ ಮಾನೆ ಮಾಜಿ ಸೈನಿಕರ ಕೋಟಾದಲ್ಲಿ ಪ್ರಥಮ ಸ್ಥಾನದಲ್ಲಿ ಪಿಎಸ್ಐ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು.
ಹಾಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಬಂಧಿಸಿದ್ದ ಸಿಐಡಿ ಇದೇ ಮೊದಲ ಬಾರಿಗೆ ಮಾಜಿ ಸೈನಿಕನನ್ನು ಬಂಧಿಸಿದೆ.