Saturday, December 14, 2024
Homeಸುದ್ದಿರಾಜ್ಯಹಾವೇರಿ: ಬಾಲಕಿಯನ್ನು ಗರ್ಭಿಣಿ ಮಾಡಿದ ಅಪರಾಧಿಗೆ 10 ವರ್ಷ ಜೈಲು

ಹಾವೇರಿ: ಬಾಲಕಿಯನ್ನು ಗರ್ಭಿಣಿ ಮಾಡಿದ ಅಪರಾಧಿಗೆ 10 ವರ್ಷ ಜೈಲು

ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆ ಗರ್ಭಿಣಿಯಾಗಲು ಕಾರಣನಾದ ಅಪರಾಧಿಗೆ ಇಲ್ಲಿನ ವಿಶೇಷ ಸೆಷನ್ಸ್ ನ್ಯಾಯಲತ 10 ವರ್ಷ ಶಿಕ್ಷೆ ವಿಧಿಸಿದೆ. ಅಸ್ಪಾಕ್‌ ಚಮನಸಾಬ್‌ ಕೋಟಿ ಎಂಬಾತ ಅಪರಾಧಿ. ವಿಶೇಷ ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶರಾದ ನಿಂಗೌಡ ಪಾಟೀಲ ಅವರು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹1.60 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದರು. ಅಸ್ಪಾಕ ಚಮನಸಾಬ ಕೋಟಿ  2017ರ ಅಕ್ಟೋಬರ್ ನಲ್ಲಿ ಬಾಲಕಿಯು ತನ್ನ ಜಮೀನಿನಲ್ಲಿ ಒಬ್ಬಳೇ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಬಾಲಕಿಯ ಇಚ್ಚೆಯ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿ, ಗರ್ಭಿಣಿಯನ್ನಾಗಿ ಮಾಡಿದ ಬಗ್ಗೆ ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹಾನಗಲ್ ವೃತ್ತದ ತನಿಖಾಧಿಕಾರಿ ಸಿಪಿಐ ಎಸ್.ಆರ್.ಗಣಾಚಾರಿ ಪ್ರಕರಣದ ತನಿಖೆ ನಡೆಸಿ ದೋಷರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ವಿಜಯಕುಮಾರ ಶಂಕರಗೌಡ ಪಾಟೀಲ ವಾದ ಮಂಡಿಸಿದ್ದರು.