Monday, May 19, 2025
Homeಬೆಂಗಳೂರು ವಿಭಾಗಬೆಂಗಳೂರು ನಗರಇಸ್ರೊ ಕಚೇರಿಗೆ ಪ್ರಧಾನಿ ಮೋದಿ ಭೇಟಿ: ಸಂಚಾರ ಮಾರ್ಗ ಬದಲಾವಣೆ

ಇಸ್ರೊ ಕಚೇರಿಗೆ ಪ್ರಧಾನಿ ಮೋದಿ ಭೇಟಿ: ಸಂಚಾರ ಮಾರ್ಗ ಬದಲಾವಣೆ

ಬೆಂಗಳೂರು: ಚಂದ್ರಯಾನ ಯಶಸ್ವಿಯಾದ ಕಾರಣ ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೊ ಕಚೇರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆ.26ರಂದು ಭೇಟಿ ನೀಡಲಿದ್ದಾರೆ.

ಅವರ ಸಂಚಾರಕ್ಕೆ ಅನುಕೂಲ ಕಲ್ಪಿಸಲು ಹಲವು ರಸ್ತೆಗಳಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ.

ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಶನಿವಾರ ಬೆಳಗ್ಗೆ ಪ್ರಧಾನಿ ಬರಲಿದ್ದಾರೆ. ಬೆಳಗ್ಗೆ 4:30 ಗಂಟೆಯಿಂದ ಬೆಳಗ್ಗೆ 9:30 ಗಂಟೆಯವರೆಗೆ ಕೆಲ ರಸ್ತೆಗಳಲ್ಲಿ ಸಾರ್ವಜನಿಕರ ವಾಹನ ಸಂಚಾರ ನಿರ್ಬಂಧಿಸಿ, ಮಾರ್ಗ ಬದಲಾವಣೆ ಮಾಡಲಾಗಿದೆ. ಸಾರ್ವಜನಿಕರು ಪರ್ಯಾಯ ರಸ್ತೆಗಳನ್ನು ಬಳಸಬೇಕು ಎಂದು ಸಂಚಾರ ಪೋಲಿಸರು ಕೋರಿದ್ದಾರೆ.

ಈ ಅವಧಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣ ನಿರ್ಭಂದಿಸಲಾಗಿದೆ ಎಂದು ಹೇಳಿದ್ದಾರೆ.