Saturday, December 14, 2024
Homeರಾಜ್ಯಉತ್ತರ ಕರ್ನಾಟಕಪಟಾಕಿ ಮಳಿಗೆಯಲ್ಲಿ ಬೆಂಕಿ ಅವಘಡ: ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆ

ಪಟಾಕಿ ಮಳಿಗೆಯಲ್ಲಿ ಬೆಂಕಿ ಅವಘಡ: ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆ

ಹಾವೇರಿ: ತಾಲ್ಲೂಕಿನ ಆಲದಕಟ್ಟಿಯ ಸಮೀಪ ಮಂಗಳವಾರ ಸಂಭವಿಸಿದ ಪಟಾಕಿ ಗೋದಾಮಿನ ಬೆಂಕಿ ಅವಘಡದಲ್ಲಿ ಮೂವರು ಸಜೀವ ದಹನಗೊಂಡಿರುವುದು ಪತ್ತೆಯಾಗಿತ್ತು. ತಡರಾತ್ರಿ ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಮೃತಪಟ್ಟವರನ್ನು ಜಯಣ್ಣ (45) ಎಂದು ಗುರುತಿಸಲಾಗಿದೆ. ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ಹಾವೇರಿ ತಾಲ್ಲೂಕಿನ ಕಾಟೇನಹಳ್ಳಿ ಗ್ರಾಮದ ದ್ಯಾಮಪ್ಪ ಓಲೇಕಾರ (45), ರಮೇಶ ಬಾರ್ಕಿ (28), ಶಿವಲಿಂಗ ಅಕ್ಕಿ (28) ಅವರ ದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮೊದಲು ಪತ್ತೆಯಾಗಿತ್ತು. ವೆಲ್ಡಿಂಗ್‌ ಕೆಲಸಕ್ಕೆ ಬಂದಿದ್ದ ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ತಗ್ಗಿನಕೆರೆ ನಿವಾಸಿ ವಾಸಿಂ‌ ಶಫಿ ಅಹಮದ್‌ (32) ಬೆಂಕಿಯ ಕೆನ್ನಾಲಿಗೆಯಿಂದ ತಪ್ಪಿಸಿಕೊಳ್ಳಲು ಗೋದಾಮಿನ ಮೊದಲ ಮಹಡಿಯಿಂದ ಕೆಳಕ್ಕೆ ಜಿಗಿದ ಪರಿಣಾಮ ಬೆನ್ನು ಮೂಳೆ ಮುರಿದುಕೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದರು. ಗಾಯಗೊಂಡಿದ್ದ ವಾಸಿಂ ಮತ್ತು ಶೇರು ಮಾಳಪ್ಪ ಕಟ್ಟಿಮನಿ ಈ ಇಬ್ಬರನ್ನೂ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋದಾಮಿನ ಸಮೀಪದಲ್ಲಿದ್ದ ಮನೆಯ ನಿವಾಸಿ ಕಲಾವತಿ ಕೆ.ಎಸ್‌. ಎಂಬುವವರು ವಾತಾವರಣದಲ್ಲಿ ಹರಡಿದ ಹೊಗೆಯಿಂದ ಅಸ್ವಸ್ಥರಾಗಿ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತತಿದ್ದಾರೆ.  ಪಟಾಕಿ ದುರಂತದಲ್ಲಿ ಒಟ್ಟು ನಾಲ್ವರು ಸಜೀವ ದಹನಗೊಂಡಿದ್ದಾರೆ. ತನಿಖೆ ಮುಂದುವರಿದಿದೆ.