Monday, May 19, 2025
Homeರಾಜ್ಯಉತ್ತರ ಕರ್ನಾಟಕನೆಟೆ ರೋಗ ಸಂತ್ರಸ್ತರಿಗೆ ಪರಿಹಾರ ಹಣ ಬಿಡುಗಡೆ

ನೆಟೆ ರೋಗ ಸಂತ್ರಸ್ತರಿಗೆ ಪರಿಹಾರ ಹಣ ಬಿಡುಗಡೆ

ಬೆಂಗಳೂರು : ಕರ್ನಾಟಕದ ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ  ರೋಗದಿಂದ ಕಳೆದ  ಸಾಲಿನಲ್ಲಿ  ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ   ಬಾಕಿ ಇದ್ದ ಪರಿಹಾರ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರ ಮನವಿ ಮೇರೆಗೆ  ನೆಟೆ ರೋಗ ಸಂತ್ರಸ್ತರಿಗೆ ಬಾಕಿ ಇದ್ದ 223 ಕೋಟಿ ರೂ ಗಳನ್ನು  ಸರ್ಕಾರ ಮಂಜೂರು ಮಾಡಿ 74 ಕೊಟಿ ರೂಗಳನ್ನು  ಬಿಡುಗಡೆ ಮಾಡಿತ್ತು.

ಪ್ರಸ್ತುತ 2ನೇ ಕಂತಿನಲ್ಲಿ 74 ಕೋಟಿ ರೂ ಬಿಡುಗಡೆಗೊಳಿಸಲಾಗಿದೆ. ಬಾಕಿ ಉಳಿದ ರೂ 75 ಕೋಟಿ ಹಣವನ್ನು ಸಹ ಶೀಘ್ರವಾಗಿ ಬಿಡುಗಡೆ ಮಾಡಲಾಗುವುದು.

ಇದಕ್ಕಾಗಿ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರಿಗೆ ಧನ್ಯವಾದ ಸಮರ್ಪಿಸಿದ್ದು ನಮ್ಮ ಸರ್ಕಾರ  ರೈತರ  ನೆರವಿಗೆ  ಸದಾ ಇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.