ರಾಮನಗರ: ತಾಲ್ಲೂಕಿನ ಕೈಲಾಂಚ ಹೋಬಳಿಯ ಕೆರೆಮೇಗಳದೊಡ್ಡಿ ಗ್ರಾಮದ ರೌಡಿಶೀಟರ್ ಲೋಕೇಶ್ (49) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿದ್ದಾರೆ. ಶನಿವಾರ ರಾತ್ರಿ ಲೋಕೇಶ್ ಮನೆ ಬಳಿಯೇ ಕೊಲೆ ನಡೆದಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಡಿವೈಎಸ್ಪಿ ದಿನಕರ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಲೋಕೇಶ್ ವಿರುದ್ಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊಲೆ, ಕೊಲೆ ಯತ್ನ ಸೇರಿದಂತೆ ಕೆಲ ಪ್ರಕರಣಗಳು ದಾಖಲಾಗಿದ್ದವು. ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೃತ್ಯ ನಡೆದಿರುವ ಅನುಮಾನವಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿ, ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.