ಶಿವಮೊಗ್ಗ: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗ ತಹಶೀಲ್ದಾರ್ ಎನ್.ಜೆ. ನಾಗರಾಜ್ ಅವರನ್ನು ಅಮಾನತು ಮಾಡಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ಗ್ರೇಡ್ 1 ತಹಶೀಲ್ದಾರ್ ಆಗಿದ್ದ ವೇಳೆ ನಾಗರಾಜ್ ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಲೋಕಾಯುಕ್ತ ಸಂಸ್ಥೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇಲಾಖೆ ವಿಚಾರಣೆಯನ್ನು ಬಾಕಿ ಇರಿಸಿ ತಕ್ಷಣದಿಂದ ಸೇವೆಯಿಂದ ಬಿಡುಗಡೆ ಮಾಡಿ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.
ನಾಗರಾಜ್ ಆದಾಯಕ್ಕಿಂತ ಶೇ 138.37ರಷ್ಟು ಆದಾಯ ಹೊಂದಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.