ಬೆಂಗಳೂರು: ವಿವಿಧ ಪಕ್ಷಗಳಿಗೆ ಸುತ್ತಾಡಿರುವ ಮಾಜಿ ಶಾಸಕ, ಮಾಜಿ ಸಂಸದ ಅಯನೂರು ಮಂಜುನಾಥ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಜುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದರು.
ಬಿಜೆಪಿ ತ್ಯಜಿಸಿ ಜೆಡಿಎಸ್ ಸೇರಿದ್ದ ಆಯನೂರು ಮಂಜುನಾಥ್ ಮತ್ತು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಶಿಕಾರಿಪುರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ನಾಗರಾಜ್ ಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಚಂದ್ರಪ್ಪ, ಸಚಿವ ಮಧು ಬಂಗಾರಪ್ಪ ಮತ್ತಿತರರು ಇದ್ದರು.
ವಿಧಾನಸಭೆ, ವಿಧಾನ ಪರಿಷತ್, ಲೋಕಸಭೆ , ರಾಜ್ಯಸಭೆ ಹೀಗೆ ಎಲ್ಲದರ ಸದಸ್ಯರಾಗಿದ್ದ ಹೆಗ್ಗಳಿಕೆ ಆಯನೂರು ಹೊಂದಿದ್ದಾರೆ.