Monday, May 19, 2025
Homeರಾಜ್ಯಕಲ್ಯಾಣ ಕರ್ನಾಟಕಬಸ್ ಪಲ್ಟಿ : ಶಾಲಾ ಮಕ್ಕಳು ಸೇರಿದಂತೆ 40 ಜನರಿಗೆ ಗಾಯ.

ಬಸ್ ಪಲ್ಟಿ : ಶಾಲಾ ಮಕ್ಕಳು ಸೇರಿದಂತೆ 40 ಜನರಿಗೆ ಗಾಯ.

ಸಂಡೂರು : ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ನಿಡುಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಟೀನ್ ಕಂಬ ಹಾಗೂ ಉತ್ತರ ಮಲೈ ಮಧ್ಯೆ ಕೆಎಸ್ ಆರ್ ಟಿಸಿ ಬಸ್ ನೆಲಕ್ಕುಳಿದೆ. ಅಪಘಾತದಲ್ಲಿ ಶಾಲಾ ಮಕ್ಕಳು ಸೇರಿದಂತೆ ನಲವತ್ತಕ್ಕೂ‌ಹೆಚ್ಚು ಜನಕ್ಕೆ ಗಾಯಗಳಾಗಿವೆ . ಗಾಯಾಳುಗಳನ್ನು ಸಂಡೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಿರುವ ಎಂಟತ್ತು ಮಕ್ಕಳನ್ನು ಆ್ಯಂಬ್ಯುಲೆನ್ಸ್ ಮೂಲಕ ಬಳ್ಳಾರಿಯ ವಿಮ್ಸ್ ಗೆ ಕರೆದೊಯ್ಯಲಾಗಿದೆ. ಅಪಘಾತದಲ್ಲಿ ಬಸ್ ಕಂಡಕ್ಟರ್ ಗೆ ಕೈ ಮುರಿದಿದೆ.
ಚಿಕಿತ್ಸೆ ನೀಡಲಾಗುತ್ತಿರುವ ಸಂಡೂರು ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಭೇಟಿ ನೀಡಿದ್ದಾರೆ.ಅಪಘಾತಕ್ಕೆ ಖಚಿತ ಕಾರಣ ಇನ್ನೂ ತಿಳಿದು ಬಂದಿಲ್ಲ.

ಗಿರೆನಹಳ್ಳಿ ,ಉತ್ತರ ಮಲೈ ಭಾಗದಿಂದ ಸಂಡೂರಿಗೆ ಬರುತ್ತಿದ್ದ ಬಸ್ ನಲ್ಲಿ ಶಾಲಾ ಕಾಲೇಜು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣ ಮಾಡುತ್ತಿದ್ದರು.