Saturday, December 14, 2024
Homeರಾಜ್ಯಕರಾವಳಿ ಕರ್ನಾಟಕಚೈತ್ರಾ ಕುಂದಾಪುರ ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ: ಬಸವರಾಜ ಬೊಮ್ಮಾಯಿ

ಚೈತ್ರಾ ಕುಂದಾಪುರ ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ: ಬಸವರಾಜ ಬೊಮ್ಮಾಯಿ

ಮಂಗಳೂರು: ಚೈತ್ರಾ ಕುಂದಾಪುರ ಪ್ರಕರಣ ಹಾಗೂ ಅವರ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸಬರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಇಲ್ಲಿ ಮಾತನಾಡಿದ ಅವರು, ಈ ಪ್ರಕರಣದ ಸಮಗ್ರ ತನಿಖೆ ಆಗಬೇಕು, ಯಾರೇ ಇದರಲ್ಲಿ ಭಾಗಿ ಆಗಿದ್ದರೂ ಶಿಕ್ಷೆ ಆಗಲಿ ಎಂದರು.

ಸ್ವಾಮೀಜಿಯಷ್ಟೇ ಅಲ್ಲ, ಯಾರೇ ಇದ್ದರೂ ಅವರ ಬಂಧನ ಆಗಬೇಕು. ಟಕೆಟ್ ಕೊಡಿಸುವುದಾಗಿ ಹೇಳಿ ಹಣ ಪಡೆದಿರುವುದನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ ಎಂದರು. ಬಿಜೆಪಿಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ ಎನ್ನುವುದು ಮಾತ್ರ ಸ್ಪಷ್ಟ ಎಂದು ಬೊಮ್ಮಾಯಿ ಹೇಳಿದರು.

ಹಲವರು ಹೋರಾಟ ಮಾಡುತ್ತಾರೆ. ಆದರೆ ಅದಕ್ಕೆ ಪಕ್ಷಕ್ಕೆ ಸಂಬಂಧ ಇರುವುದಿಲ್ಲ ಎಂದ ಅವರು ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆದು ಸತ್ಯ ಹೊರ ಬರಲಿ ಎಂದರು.