Saturday, December 14, 2024
Homeಮೈಸೂರು ವಿಭಾಗಮಂಡ್ಯಸಿ.ಎಂ, ಡಿಸಿಎಂ ರಾಜೀನಾಮೆಗೆ ಒತ್ತಾಯಿಸಿ ಅರೆಬೆತ್ತಲೆ ಪ್ರತಿಭಟನೆ

ಸಿ.ಎಂ, ಡಿಸಿಎಂ ರಾಜೀನಾಮೆಗೆ ಒತ್ತಾಯಿಸಿ ಅರೆಬೆತ್ತಲೆ ಪ್ರತಿಭಟನೆ

ಮಂಡ್ಯ: ತಮಿಳುನಾಡಿಗೆ ನೀರು ಹರಿಸಿ ಇಲ್ಲಿನ ರೈತರಿಗೆ ಅನ್ಯಾಯ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಮಂಡ್ಯದಲ್ಲಿ ರೈತರು ಅರೆಬೆತ್ತಲೆ ಪ್ರತಿಭಟನೆ ಮಾಡಿದರು. ‘ತಮಿಳುನಾಡಿಗೆ ‌ಹರಿಯುತ್ತಿರುವ ಕಾವೇರಿ ನೀರು ಸ್ಥಗಿತಗೊಳಿಸುವವರೆಗೂ‌ ನಿರಂತರವಾಗಿ ಹೋರಾಟ ನಡೆಸುತ್ತೇವೆ’ ಎಂದು ಭೂಮಿತಾಯಿ ಹೋರಾಟ ಸಮಿತಿ‌ ಸದಸ್ಯರು ಶ್ರೀರಂಗಪಟ್ಟಣದಲ್ಲಿ ಕಾವೇರಿ ನದಿ ನೀರು ಮುಟ್ಟಿ ಪ್ರಮಾಣ ಮಾಡಿದರು. ಕಾವೇರಿ ನದಿ‌ ಸ್ನಾನಘಟ್ಟದ ಬಳಿ‌ ಸೇರಿದ ಮುಖಂಡರು ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜೀನಾಮೆಗೆ ಒತ್ತಾಯಿಸಿದರು. ನದಿಗೆ ಇಳಿದು ನೀರು ಮುಟ್ಟಿ ಅನಿರ್ಧಿಷ್ಟಾವಧಿ ಹೋರಾಟ ಆರಂಭಿಸಿದರು. ಸ್ನಾನಘಟ್ಟದಿಂದ ತಾಲ್ಲೂಕು ಕಚೇರಿವರೆಗೂ ಮೆರವಣಿಗೆ ನಡೆಸಿದರು.