Saturday, December 14, 2024
Homeಸುದ್ದಿರಾಜ್ಯಕಾಂಗ್ರೆಸ್ ಸೇರುತ್ತಿಲ್ಲ: ಶಂಕರ ಪಾಟೀಲ ಮುನೇನಕೊಪ್ಪ ಸ್ಪಷ್ಟನೆ

ಕಾಂಗ್ರೆಸ್ ಸೇರುತ್ತಿಲ್ಲ: ಶಂಕರ ಪಾಟೀಲ ಮುನೇನಕೊಪ್ಪ ಸ್ಪಷ್ಟನೆ

ಕಾಂಗ್ರೆಸ್ ಸೇರುತ್ತಿಲ್ಲ: ಶಂಕರ ಪಾಟೀಲ ಮುನೇನಕೊಪ್ಪ ಸ್ಪಷ್ಟನೆ ಹುಬ್ಬಳ್ಳಿ: ‘ಸದ್ಯಕ್ಕೆ ನಾನು ಕಾಂಗ್ರೆಸ್ ಸೇರುತ್ತಿಲ್ಲ. ಲೋಕಸಭೆಗೆ ಸ್ಪರ್ಧಿಸುವ ಬಗ್ಗೆ ಯಾವ ಯೋಚನೆಯೂ ಮಾಡಿಲ್ಲ. ಮುಂದಿನ ನಿರ್ಧಾರವನ್ನು ಜನವರಿ ನಂತರ ತಿಳಿಸುವೆ’ ಎಂದು ಬಿಜೆಪಿ ನಾಯಕ ಶಂಕರ ಪಾಟೀಲ ಮುನೇನಕೊಪ್ಪ ಸ್ಪಷ್ಟಪಡಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್, ಜಗದೀಶ ಶೆಟ್ಟರ್ ಸೇರಿದಂತೆ ಯಾವುದೇ ಕಾಂಗ್ರೆಸ್ ಮುಖಂಡರು ನನ್ನನ್ನು ಇದುವರೆಗೆ ಸಂಪರ್ಕಿಸಿಲ್ಲ ಎಂದು ಹೇಳಿದರು. ಆತ್ಮಹತ್ಯೆ ಮಾಡಿಕೊಂಡ ಕುಟುಂಬಕ್ಕೆ ಪರಿಹಾರ ನೀಡಿ: ಸಿದ್ದರಾಮಯ್ಯ ಸೂಚನೆ ಮೈಸೂರು: ಆತ್ಮಹತ್ಯೆ ಮಾಡಿಕೊಂಡ ಪ್ರತಿ ರೈತರ ಕುಟುಂಬಕ್ಕೂ ಪರಿಹಾರ ಒದಗಿಸಬೇಕು ಎಂದು ಮುಖ್ಯಮಂತ್ರಿ ‌ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು. ಮೈಸೂರು ಜಿಲ್ಲಾ ಪಂಚಾಯಿತಿಯಲ್ಲಿ ಸೋಮವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ರೈತರ ಆತ್ಮಹತ್ಯೆಗೆ ಪರಿಹಾರ ಕೊಡುವ ವಿಷಯದಲ್ಲಿ ಉದಾರವಾಗಿರಬೇಕು. ಸರ್ಕಾರ ಹಣ ಕೊಡುತ್ತದೆಯೇ‌ ಹೊರತು ನೀವಲ್ಲ. ತಕ್ಷಣ ನೀಡಬೇಕು. ಅನಗತ್ಯವಾಗಿ‌ ವಿಳಂಬ ಮಾಡಬಾರದು. 5 ಲಕ್ಷ ರೂಪಾಯಿ ಪರಿಹಾರವನ್ನು ಕೂಡಲೇ‌ ಕೊಡಬೇಕು ಎಂದರು.

ಪರಿಹಾರಕ್ಕಾಗಿ ಯಾವ ರೈತರೂ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ. ದಸರಾ ಇದೆ ಎಂಬ ಕಾರಣಕ್ಕೆ ಎಲ್ಲರೂ ಅದರಲ್ಲೇ ಮುಳುಗಿ ಹೋಗಬಾರದು. ಇತರ ಕೆಲಸಗಳಿಗೂ ಆದ್ಯತೆ ಕೊಡಬೇಕು ಎಂದು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು. ಅಧಿಕಾರಿಗಳ ನಿರ್ಲಕ್ಷ್ಯದಿಂದ ಸತ್ತಿದ್ದರೆ ಸಂಬಂಧಿಸಿದವರ ಮೇಲೂ ಕ್ರಮ‌ ಜರುಗಿಸಬೇಕು.‌ ಆತ್ಮಹತ್ಯೆಗೆ ಕಾರಣವೇನು ಎನ್ನುವುದನ್ನೂ ತಿಳಿದುಕೊಳ್ಳಬೇಕು. ಕಾರಣವಾದವರ ಮೇಲೂ ಕ್ರಮ ಕೈಗೊಳ್ಳಬೇಕು. ಸರ್ಕಾರಕ್ಕೆ ಕೆಟ್ಟ ಹೆಸರು ಬರದಂತೆ ನೋಡಿಕೊಳ್ಳಬೇಕು.‌ ರೈತರೊಂದಿಗೆ ಗೌರವಯುತವಾಗಿ ನಡೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ‌ ಸೂಚಿಸಿದರು. ರೈತರು ಸಂಕಷ್ಟದಲ್ಲಿದ್ದಾರೆ. ಅವರ ನೋವಲ್ಲಿ ನೀವೂ ಭಾಗಿಯಾಗಬೇಕು ಎಂದು ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹಾಗೂ ಪಶುಸಂಗೋಪನಾ ಇಲಾಖೆಯ ಸಚಿವ ಕೆ. ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ, ಟಿ.ಎಸ್.ಶ್ರೀವತ್ಸ, ಡಿ.ರವಿಶಂಕರ್, ಅನಿಲ್ ಚಿಕ್ಕಮಾದು, ಎ.ಎಚ್. ವಿಶ್ವನಾಥ್, ಜಿ‌.ಡಿ. ಹರೀಶ್ ಗೌಡ, ಡಾ.ಡಿ. ತಿಮ್ಮಯ್ಯ, ಮರಿತಿಬ್ಬೇಗೌಡ, ಸಿ.ಎನ್. ಮಂಜೇಗೌಡ ಭಾಗಿಯಾಗಿದ್ದರು.