ಬೆಂಗಳೂರು: ಮುನೇಕೊಳಲು ಬಳಿಯ ವಸಂತನಗರದ ಮನೆಯೊಂದರಲ್ಲಿ ಅಡುಗೆ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಭಾನುವಾರ ಬೆಳಗ್ಗೆ ಈ ಅವಘಡ ಸಂಭವಿಸಿದೆ. ಮನೆಯಲ್ಲಿದ್ದ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಮಾರತ್ತಹಳ್ಳಿ ಪೊಲೀಸರು ತಿಳಿಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸುತ್ತಿದ್ದಾರೆ.
ಚಾಮರಾಜನಗರದ ಕುಟುಂಬ, ಹಲವು ವರ್ಷಗಳಿಂದ ವಸಂತನಗರದಲ್ಲಿ ವಾಸವಿತ್ತು