ವಿಜಯಪುರ: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ಅಂಜಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಡುಗೆ ಅನಿಲ ದರ ಕಡಿತ ಮಾಡಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಲುವ ಭೀತಿಯಿಂದ ಅಡುಗೆ ಅನಿಲ ಸಿಲಿಂಡರ್ ದರ ಕಡಿತ ಮಾಡಿದ್ದಾರೆ ಎಂದು ಆರೋಪಿಸಿದರು. ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಡಿಮೆ ದರಕ್ಕೆ ಎಲ್‌ಪಿಜಿ ಪೂರೈಸಲಾಗುವುದು ಎಂದು ಹೇಳಿಕೆ ನೀಡಿದ್ದರು. ಅಲ್ಲದೇ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ರಾಷ್ಟ್ರದಾದ್ಯಂತ ಜಾರಿಗೊಳಿಸಲಾಗುವುದು ಎಂದು ಹೇಳಿದ್ದರಿಂದ ಬಿಜೆಪಿ ಅಂಜಿದ ಎದ ಅಭಿಪ್ರಾಯಪಟ್ಟರು.
ಗ್ಯಾರಂಟಿಗೆ ಅಂಜಿ ಕೇಂದ್ರದಿಂದ ಸಿಲಿಂಡರ್ ದರ ಕಡಿತ: ಎಂ.ಬಿ.ಪಾಟೀಲ
Previous articleಪರಿಷತ್ ನೂತನ ಸದಸ್ಯರ ಪ್ರಮಾಣ ವಚನ