Monday, May 19, 2025
Homeಕಲ್ಯಾಣ ಕರ್ನಾಟಕಕಲಬುರ್ಗಿಗುಂಡು ಹಾರಿಸಿ ಪತ್ನಿಯ ಕೊಲೆ ಮಾಡಿ ಪತಿ ಆತ್ಮಹತ್ಯೆ

ಗುಂಡು ಹಾರಿಸಿ ಪತ್ನಿಯ ಕೊಲೆ ಮಾಡಿ ಪತಿ ಆತ್ಮಹತ್ಯೆ

ಕಲಬುರಗಿ : ಚಿತ್ತಾಪುರ ತಾಲ್ಲೂಕಿನ ಅಲ್ಲೂರ್ (ಕೆ) ಗ್ರಾಮದಲ್ಲಿ ಗುರುವಾರ ಪತ್ನಿಗೆ ಗುಂಡು ಹಾರಿಸಿ ಕೊಲೆ ಮಾಡಿದ ಆರೋಪಿ ಗಂಡ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ..

ಅಲ್ಲೂರ್ (ಬಿ) ಗ್ರಾಮದ ಬಸವರಾಜ ಹಂಪಯ್ಯ (40) ಎಂಬುವವರೇ ಮನೆಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟವರು.

ತನ್ನ ಪತ್ನಿ ಹಣಮವ್ವ (35) ಅವರನ್ನು ಗುರುವಾರ ಅಲ್ಲೂರ್ (ಕೆ) ಗ್ರಾಮದಲ್ಲಿ ಬಂದೂಕಿನಿಂದ ಗುಂಡು ಹಾರಿಸಿ ಕೊಲೆ ಮಾಡಿ ಪರಾರಿಯಾಗಿ ತಲೆಮರೆಸಿಕೊಂಡಿದ್ದ.

ಬಸವರಾಜನ ಪತ್ತೆಗೆ ಚಿತ್ತಾಪುರ ಪೊಲೀಸರು ಶೋಧ ಕಾರ್ಯ ನಡೆಸಿದ್ದರು.

ಶನಿವಾರ ರಾತ್ರಿ ಬಸವರಾಜನ ಮನೆಯಿಂದ ದುರ್ವಾಸನೆ ಹರಡುತ್ತಿರುವುದು ಗಮನಿಸಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೆಗೆ ಭೇಟಿ ನೀಡಿದಾಗ ಬಸವರಾಜ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಸ್ಥಳಕ್ಕೆ ಸಿಪಿಐ ಪ್ರಕಾಶ ಯಾತನೂರು, ಪಿಎಸ್ಐ ಶ್ರೀಶೈಲ್ ಅಂಬಾಟಿ ಪರಿಶೀಲಿಸಿದರು‌.

ಚಿತ್ತಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.