Saturday, December 14, 2024
Homeಕಲ್ಯಾಣ ಕರ್ನಾಟಕಕಲಬುರ್ಗಿಕಾವೇರಿ ನೀರು: ಯಡಿಯೂರಪ್ಪ ನವರದ್ದು ರಾಜಕೀಯ ಹೇಳಿಕೆ-ಸಿಎಂ ಸಿದ್ದರಾಮಯ್ಯ

ಕಾವೇರಿ ನೀರು: ಯಡಿಯೂರಪ್ಪ ನವರದ್ದು ರಾಜಕೀಯ ಹೇಳಿಕೆ-ಸಿಎಂ ಸಿದ್ದರಾಮಯ್ಯ

ಕಲಬುರಗಿ : ಕಾವೇರಿ ನೀರು ವಿಚಾರವಾಗಿ ಯಡಿಯೂರಪ್ಪ ನವರ ಹೇಳಿಕೆ ರಾಜಕೀಯವಾಗಿ ಪ್ರೇರಿತ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಅವರು ಇಂದು ಕಲಬುರಗಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತಾನಾಡಿದರು.

ನೀರು ಬಿಡಲು ನಮ್ಮ ಬಳಿ ನೀರಿಲ್ಲ, ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತಿದ್ದು, ನ್ಯಾಯಾಲಯ ಸಮಿತಿಯ ಆದೇಶ ಪಾಲನೆ ಮಾಡಿಲ್ಲ ಎಂದು ಪ್ರಶ್ನಿಸಿದೆ. ನೀರು ಬಿಡಬೇಕೆಂದಿದ್ದರೂ ನಮಗೆ 106 ಟಿ. ಎಂ. ಸಿ ನೀರಿನ ಅಗತ್ಯವಿದೆ. ನಮ್ಮ ಬಳಿ ಇರುವುದೇ 53 ಟಿಎಂಸಿ. ಕುಡಿಯುವ ನೀರಿಗೆ 30 ಟಿಎಂಸಿ, ಬೆಳೆ ಉಳಿಸಿಕೊಳ್ಳಲು 70 ಟಿಎಂಸಿ ನೀರು ಮತ್ತು ಕೈಗಾರಿಕೆಗಳಿಗೆ 3 ಟಿಎಂಸಿ ಅಗತ್ಯ. ಒಟ್ಟು 106 ಟಿಎಂಸಿ ನಮಗೆ ಅಗತ್ಯವಿದೆ. ನಮ್ಮ ಬಳಿ ಇರುವುದೇ 53 ಟಿಎಂಸಿ ನೀರು. ನೀರು ಕೊಡಲು ನಮ್ಮ ಬಳಿ ನೀರಿಲ್ಲ. ಕಾವೇರಿ ನೀರನ್ನು ತಮಿಳುನಾಡಿಗೆ ಯಡಿಯೂರಪ್ಪ ಅವರ ಕಾಲದಲ್ಲಿ ಹಾಗೂ ಎಲ್ಲರ ಕಾಲದಲ್ಲಿ ಬಿಡಲಾಗಿದೆ.

ಸಾಮಾನ್ಯ ವರ್ಷದಲ್ಲಿ 177.25 ಟಿಎಂಸಿ ನೀರು ಬಿಡಲಾಗುತ್ತದೆ. ಈವರೆಗೆ 37.7 ಟಿಎಂಸಿ ಮಾತ್ರ ಬಿಟ್ಟಿದ್ದೇವೆ. ನಾವು ಬಿಡಬೇಕಿದ್ದುದ್ದು 99 ಟಿಎಂಸಿ ನೀರು. ಎಲ್ಲಿ ನೀರು ಬಿಟ್ಟಿದ್ದೇವೆ ಎಂದು ಮರು ಪ್ರಶ್ನಿಸಿದರು.

ಕಾವೇರಿ ನೀರು ನಿಯಂತ್ರಣ ಸಮಿತಿ 5000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದು ಸೂಚಿಸಿದೆ. ಅಷ್ಟು ನೀರು ಇಲ್ಲದಿರುವುದರಿಂದ ನಾವು ನೀರು ಬಿಟ್ಟಿಲ್ಲ ಎಂದರು.

ಇಂಡಿಯಾ ಯಾವ ಧರ್ಮದ ವಿರುದ್ಧವೂ ಇಲ್ಲ.

ಇಂಡಿಯಾ ಒಕ್ಕೂಟ ಸನಾತನ ಧರ್ಮದ ವಿರುದ್ಧವಿದೆ ಎಂದು ಬಿಜೆಪಿಯ ಹೇಳಿಕೆ ಬಗ್ಗೆ ಮಾತನಾಡಿ ನಾವು ಯಾವ ಧರ್ಮದ ವಿರುದ್ದ ಇಲ್ಲ. ಎಲ್ಲ ಧರ್ಮಗಳನ್ನು ಸಮಾನವಾಗಿ ಕಾಣುತ್ತೇವೆ. ಧರ್ಮ ಎಂದರೆ ಬದುಕಿನ ದಾರಿ. ಜನರಿಗಾಗಿ ಧರ್ಮವಿರುವುದು, ಧರ್ಮಕ್ಕಾಗಿ ಜನ ಅಲ್ಲ ಎಂದರು. ಧರ್ಮ ಮನುಷ್ಯನ ಒಳಿತಿಗಾಗಿ ಇದೆ. ದಯೆಯೇ ಧರ್ಮದ ಮೂಲ. ದಯೆ ಇಲ್ಲದ ಧರ್ಮ ಯಾವುದಯ್ಯಾ ಎಂದು ಬಸವಾದಿ ಶರಣರು ಹೇಳಿದ್ದಾರೆ. ಧರ್ಮದಲ್ಲಿ ದಯೆ, ಕರುಣೆ, ಮನುಷ್ಯತ್ವ ಇರಬೇಕು ಎಂದರು.

ಗ್ಯಾರಂಟಿ ಯೋಜನೆ ಅಭಿವೃದ್ಧಿ ಕೆಲಸ ಅಲ್ಲವೇ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸರ್ಕಾರ ಇನ್ನೂ ಗ್ಯಾರಂಟಿ ಯೋಜನೆಗಳ ಗುಂಗಿನಲ್ಲಿಯೇ ಇದೆ ಎಂದು ಪಾದಯಾತ್ರೆ ಮಾಡುವ ಬಗ್ಗೆ ಪ್ರತಿಕ್ರಿಯೆ ನೀಡಿ, 5 ಗ್ಯಾರಂಟಿ ಯೋಜನೆ ಅಭಿವೃದ್ಧಿ ಕೆಲಸ ಅಲ್ಲವೇ ಎಂದು ಪ್ರಶ್ನಿಸಿದರು. ಯಾವ ಸರ್ಕಾರ 1.13 ಕೋಟಿ ಜನರಿಗೆ 2000 ರೂ.ಗಳನ್ನು ನೀಡಿದೆ? ಯಡಿಯೂರಪ್ಪ ಅವರು 10 ಕೆಜಿಯಲ್ಲಿ ಒಂದು ಕಳು ಕಡಿಮೆಯಾದರೂ ಪ್ರತಿಭಟಿಸುವುದಾಗಿ ಹೇಳಿದ್ದರು, ಮಾಡಿದರೇ ? ಎಂದರು. ಅವರ ಕಾಲದಲ್ಲಿ 7 ಕೆಜಿ ನೀಡುತ್ತಿದ್ದ ಅಕ್ಕಿಯನ್ನು 5 ಕೆಜಿಗೆ ಇಳಿಸಿದರು. ಅಲ್ಲೇ ಗಿರಕಿ ಹೊಡೆಯುತ್ತಿದ್ದಾರೆ. ಐದು ಗ್ಯಾರಂಟಿ ಕೊಟ್ಟಿದ್ದೇವೆಂದು ಪಾದಯಾತ್ರೆ ಮಾಡುತ್ತಿದ್ದಾರೆಯೇ ಎಂದು ವಯಗವಡದರು. 600 ಭಾರವಸೆ ನೀಡಿ ಶೇ 10 ರಷ್ಟನ್ನೂ ಜಾರಿಗೆ ತರಲಿಲ್ಲ. ಅವರಿಗೆ ಯಾವ ನೈತಿಕ ಹಕ್ಕಿದೆ ಎಂದರು.

ಸಾಲಮನ್ನಾ ಮಾಡ್ತೀವಿ ಅಂದರು ಮಾಡಲಿಲ್ಲ. ನೀರಾವರಿಗೆ 1 ಲಕ್ಷ ಕೋಟಿ ನೀಡುವುದಾಗಿ ಹೇಳಿದರು. ನೀಡಲಿಲ್ಲ, ಯಾವುದನ್ನೂ ನೀಡಿಲ್ಲ ಎಂದರು.

ಮೂರು ಡಿಸಿಎಂ: ಪಕ್ಷದ ವರಿಷ್ಠರ ತೀರ್ಮಾನ ಅಂತಿಮ

ಮೂವರು ಡಿಸಿಎಂ ಮಾಡುವ ಬಗ್ಗೆ ಸಚಿವ ಕೆ.ಎನ್.ರಾಜಣ್ಣ ಹೇಳಿಕೆ ನೀಡಿರುವ ಬಗೆ ಪ್ರತಿಕ್ರಿಯೆ ನೀಡಿ, ಅಂತಿಮವಾಗಿ ಪಕ್ಷದ ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದರು. ಈಗ ಒಬ್ಬರನ್ನು ಮಾಡಿದ್ದಾರೆ. ವರಿಷ್ಠರೊಂದಿಗೆ ಮಾತನಾಡುವುದಾಗಿ ಹೇಳಿದ್ದಾರ, ಮಾತನಾಡಲಿ. ಹೈ ಕಮಾಂಡ್ ನಿರ್ಧಾರವನ್ನು ಪಾಲಿಸುವುದಾಗಿ ಹೇಳಿದರು.

ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಲು ಸರ್ವ ಪಕ್ಷ ನಿಯೋಗ

ಕೃಷ್ಣ ಮೇಲ್ದಂಡೆ ಯೋಜನೆ ವಿಚಾರ ನ್ಯಾಯಾಲಯದಲ್ಲಿದ್ದು, ಆಂಧ್ರ , ತೆಲಂಗಾಣ ಅರ್ಜಿ ಹಾಕಿದ್ದಾರೆ. ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆಯೇ ಹೊರಡಿಸಿಲ್ಲ. ಮಹದಾಯಿ ಯೋಜನೆಯಲ್ಲಿ ಗೆಜೆಟ್ ಅಧಿಸೂಚನೆ ಆಗಿದೆ. ಆದರೆ ಅರಣ್ಯ ಹಾಗೂ ಪರಿಸರ ತೀರುವಳಿ ನೀಡಿಲ್ಲ. ನಾಳೆ ಕೊಟ್ಟರೆ, ನಾಡಿದ್ದೇ ಕೆಲಸ ಶುರು ಮಾಡುತ್ತೇವೆ ಎಂದರು. ಅದಕ್ಕಾಗಿಯೇ ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ, ಯೋಜನೆಗಳ ಬಗ್ಗೆ ಸರ್ವಪಕ್ಷ ನಿಯೋಗ ತೆರಳಲು ದಿನಾಂಕ ನಿಗದಿಯಾಗುತ್ತಿಲ್ಲ. ಬಿಜೆಪಿಯವರೇ 25 ಸಂಸದರಿದ್ದಾರೆ ಎಂದರು.