Saturday, December 14, 2024
Homeರಾಜ್ಯಉತ್ತರ ಕರ್ನಾಟಕಕಲ್ಲಿನಿಂದ ಜಜ್ಜಿ ಯುವಕನ ಕೊಲೆ

ಕಲ್ಲಿನಿಂದ ಜಜ್ಜಿ ಯುವಕನ ಕೊಲೆ

ಬೆಳಗಾವಿ: ಇಲ್ಲಿನ ಶಿವಬಸವ ನಗರದಲ್ಲಿ ಬುಧವಾರ ರಾತ್ರಿ ಯುವಕನೊಬ್ಬನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ. ರಾಮನಗರದ ವಡ್ಡರವಾಡಿಯ ನಿವಾಸಿ ನಾಗರಾಜ ಗಾಡಿವಡ್ಡರ(26) ಮೃತರು. ಘಟನಾ ಸ್ಥಳಕ್ಕೆ ಮಾಳಮಾರುತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಲೆಗೆ ಕಾರಣ ಗೊತ್ತಾಗಿಲ್ಲ. ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.