ದೊಡ್ಡಬಳ್ಳಾಪುರ: ತಮಿಳುನಾಡಿಗೆ ಪ್ರತಿ ದಿನ 5 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನ ಖಂಡಿಸಿ ನಗರದಲ್ಲಿ ಗುರುವಾರ ಕನ್ನಡ ಜಾಗೃತ ಪರಿಷತ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನ ಮೆರವಣಿಗೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯದ ರೈತರ ಹಿತರಕ್ಷಣೆ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ವಾಸ್ತವ ಸ್ಥಿತಿಯನ್ನು ಕೋರ್ಟ್ ಗೆ ಮನವರಿಕೆ ಮಾಡಿಕೊಡುವಲ್ಲಿ ಸೋತಿದೆ. ಈ ಕೂಡಲೇ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು. ಅಧಿಕಾರಕ್ಕಾಗಿ ರಾಜ್ಯದ ಜನರ ಹಿತವನ್ನು ಬಲಿಕೊಡಬಾರದು ಎಂದು ಅಗ್ರಹಿಸಿದರು.
ಕನ್ನಡ ಜಾಗೃತ ಪರಿಷತ್ ಅಧ್ಯಕ್ಷ ಕೆ.ವೆಂಕಟೇಶ್, ಕಾರ್ಯದರ್ಶಿ ಡಿ.ಪಿ.ಆಂಜನೇಯ, ಕನ್ನಡ ಪಕ್ಷದ ಅಧ್ಯಕ್ಷ ವೆಂಕಟೇಶ್, ಸಂಜೀವ್ ನಾಯ್ಕ್, ಕರವೇ ಅಧ್ಯಕ್ಷ ಮರುಳಾ ಆರಾಧ್ಯ, ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸು.ನರಸಿಂಹಮೂರ್ತಿ, ಪ್ರಮೀಳಾ ಮಹದೇವ್, ಪರಮೇಶ್, ಹಮಾಮ್ ವೆಂಕಟೇಶ್ ಇದ್ದರು.