ಮೈಸೂರು: ಇಲ್ಲಿನ ರಾಮಕೃಷ್ಣ ನಗರದಲ್ಲಿರುವ ಲಿಂಗಾಂಬುಧಿ ಕೆರೆಯಲ್ಲಿ ಮೀನುಗಳ ಮಾರಣಹೋಮ ನಡೆದಿದೆ.
ಕೆರೆಗೆ ನಿರಂತರವಾಗಿ ಒಳಚರಂಡಿ ನೀರು ಸೇರುತ್ತಿದ್ದು, ಇದರಿಂದಾಗಿ ಕೆರೆಯ ನೀರೆಲ್ಲ ಹಸಿರು ಬಣ್ಣಕ್ಕೆ ತಿರುಗಿದೆ. ರಾಸಾಯನಿಕಗಳ ಮಿಶ್ರಣ ಹಾಗೂ ಆಮ್ಲಜನಕ ಕೊರತೆಯಿಂದಾಗಿ ಮೀನುಗಳು ಸಾವನ್ನಪ್ಪಿರಬಹುದು ಎನ್ನಲಾಗಿದೆ. ಕೆರೆಯ ಸುತ್ತ ಸದ್ಯ ಕೆಟ್ಟ ವಾಸನೆ ಬರುತ್ತಿದ್ದು, ಮಂಗಳವಾರ ಮುಂಜಾನೆ ವಾಯುವಿಹಾರಿಗಳು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣ ಆಗಿತ್ತು.