Saturday, December 14, 2024
Homeರಾಜ್ಯಉತ್ತರ ಕರ್ನಾಟಕಮದುವೆ ಮನೆಯಲ್ಲಿ ಆಹಾರ ಸೇವಿಸಿ ಅಸ್ವಸ್ಥರಾದವರ ಆರೋಗ್ಯ ಸ್ಥಿರ

ಮದುವೆ ಮನೆಯಲ್ಲಿ ಆಹಾರ ಸೇವಿಸಿ ಅಸ್ವಸ್ಥರಾದವರ ಆರೋಗ್ಯ ಸ್ಥಿರ

ಚಿಕ್ಕೋಡಿ: ತಾಲ್ಲೂಕಿನ ಹಿರೇಕೋಡಿ ಗ್ರಾಮದಲ್ಲಿ ಮದುವೆ ಸಮಾರಂಭದಲ್ಲಿ ಆಹಾರ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಸ್ಪಷ್ಟ ಪಡಿಸಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದ 162 ಜನರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ. ಹಿರೇಕೋಡಿ ಗ್ರಾಮದಲ್ಲಿ ಸೋಮವಾರ ಜಾಕೀರ್ ಪಟೇಲ್ ಎಂಬುವವರ ಮಗಳ ಮದುವೆ ಸಮಾರಂಭದಲ್ಲಿ ಬಾಡೂಟ ಸೇವಿಸಿದ್ದ ಜನರಲ್ಲಿ ವಾಂತಿ–ಭೇದಿ ಕಾಣಿಸಿಕೊಂಡಿತ್ತು. ಮಂಗಳವಾರ ಅವರನ್ನು ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ 97 ಜನರು ಮತ್ತು ಮತ್ತು ಯಕ್ಸಂಬಾದ ಸಮುದಾಯ ಆರೋಗ್ಯ ಕೇಂದ್ರದಲ್ಲಿ 69 ಜನರನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಜೊತೆಗೆ, ಗ್ರಾಮದಲ್ಲಿ ಎರಡು ತಾತ್ಕಾಲಿಕ ಕ್ಲಿನಿಕ್ ತೆರೆದು ಹೊರ ರೋಗಿಗಳಾಗಿ 179 ಜನರಿಗೆ ಚಿಕಿತ್ಸೆ ನೀಡಲಾಗಿತ್ತು. ಆಸ್ಪತ್ರೆಗೆ ದಾಖಲಾಗಿದ್ದವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಗುಣಮುಖರಾದವರನ್ನು ಆಂಬುಲೆನ್ಸ್ ಮೂಲಕ ಅವರ ಮನೆಗಳಿಗೆ ಕಳಿಸಲಾಗುತ್ತಿದೆ. ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯಿಂದ 36 ಹಾಗೂ ಯಕ್ಸಂಬಾ ಸಮುದಾಯ ಆರೋಗ್ಯ ಕೇಂದ್ರದಿಂದ 43 ಜನ ಸೇರಿ 79 ಮಂದಿಯನ್ನು ಮನೆಗೆ ಕಳುಹಿಸಲಾಗಿದೆ’ ಎಂದು ಇಲ್ಲಿನ ಹೆಚ್ಚುವರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ಗಡೇದ ಮಾಹಿತಿ ನೀಡಿದ್ದಾರೆ. ಗ್ರಾಮದಲ್ಲಿ ತಾತ್ಕಾಲಿಕ ಕ್ಲಿನಿಕ್‌ಗಳ ಸೇವೆಯನ್ನು ಮುಂದುವರಿಸಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ.