Saturday, December 14, 2024
Homeರಾಜ್ಯಬೆಂಗಳೂರು ವಿಭಾಗನಮ್ಮದು ಜಾತ್ಯಾತೀತ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಮ್ಮದು ಜಾತ್ಯಾತೀತ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ನಮ್ಮದು ಜಾತ್ಯಾತೀತ ಸರ್ಕಾರ. ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮೀ ಯೋಜನೆಗಳನ್ನು ಜಾತಿ ನೋಡಿ ಕೊಟ್ಟಿಲ್ಲ. ಎಲ್ಲಾ ಜಾತಿಗಳನ್ನು ಸಮಾನವಾಗಿ ಕಾಣುತ್ತೇವೆ ಎಂದರು.

ಅವರು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಮಾಧ್ಯಮದವವರೊಂದಿಗೆ ಮಾತನಾಡಿದರು.

ಶ್ಯಾಮನೂರು ಶಿವಶಂಕರಪ್ಪ ಅವರ ಹೇಳಿಕೆಯನ್ನು ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಬೇಕೆಂದು ಮಾಜಿ ಮುಖ್ಯಮಂತ್ರಿ ಬಿ ಎಸ್.ಯಡಿಯೂರಪ್ಪ ಅವರು ಹೇಳಿರುವ ಬಗ್ಗೆ ಮಾತನಾಡಿ ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ಹೆಚ್.ಡಿ.ಕುಮಾರಸ್ವಾಮಿ ಅವರು ಹತಾಶರಾಗಿದ್ದಾರೆ

ಆರು ತಿಂಗಳಲ್ಲಿ ಸರ್ಕಾರ ಬೀಳಲಿದೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅವರು ಹತಾಶರಾಗಿದ್ದಾರೆ. ಸಮ್ಮಿಶ್ರ ಸರ್ಕಾರ ಬರುತ್ತದೆ. ನಾನೇ ಮುಖ್ಯಮಂತ್ರಿಯಾಗುತ್ತೇನೆ ಎಂದುಕೊಂಡಿದ್ದರು. ಈಗ ಭ್ರಮನಿರಶನಗೊಂಡಿದ್ದಾರೆ. ಹಾಗಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದರು.