ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ನ ನೂತನ ಸದಸ್ಯರಾಗಿ ಶ್ರೀಮತಿ ಉಮಾಶ್ರೀ, ಎಮ್ ಆರ್ ಸೀತಾರಾಮ್ ಮತ್ತು ಹೆಚ್ ಪಿ ಸುದಾಮ್ ದಾಸ್ ಅವರು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಹೆಚ್ ಕೆ ಪಾಟೀಲ್, ಬೋಸರಾಜು ಸೇರಿದಂತೆ ಹಲವು ಶಾಸಕರುಗಳು, ನೂತನ ಶಾಸಕರುಗಳ ಕುಟುಂಬ ಸದಸ್ಯರು ಮತ್ತು ಅಭಿಮಾನಿಗಳು ಉಪಸ್ಥಿತರಿದ್ದರು.