Saturday, December 14, 2024
Homeರಾಜ್ಯಉತ್ತರ ಕರ್ನಾಟಕಪಟಾಕಿ ಅವಘಡ: ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಪಟಾಕಿ ಅವಘಡ: ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಹಾವೇರಿ: ತಾಲ್ಲೂಕಿನ ಆಲದಕಟ್ಟಿಯ ಸಮೀಪ ಮಂಗಳವಾರ ಸಂಭವಿಸಿದ ಪಟಾಕಿ ಗೋದಾಮಿನ ಬೆಂಕಿ ಅವಘಡದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿ ಪಡೆದರು. ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದರು. ಸ್ಥಳಕ್ಕೆ ಹೋಗುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರಿಗೆ ಸೂಚಿಸಿದರು. ಸಿಎಂ ಸೂಚನೆ ಮೇರೆಗೆ ನಿಗದಿಯಾಗಿದ್ದ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಶಿವಾನಂದ ಪಾಟೀಲ್ ಅವರು ಬೆಂಗಳೂರಿನಿಂದ ಘಟನಾ ಸ್ಥಳಕ್ಕೆ ತೆರಳಿದರು. ಮೃತಪಟ್ಟವರ ಕುಟುಂಬಕ್ಕೆ ಸಾಂತ್ವನ ಹೇಳಿದರು.