Saturday, December 14, 2024
Homeಬೆಂಗಳೂರು ವಿಭಾಗಬೆಂಗಳೂರು ನಗರಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಇನ್ನೊಂದು ಕಚೇರಿಯನ್ನು ಬೆಂಗಳೂರಿನಲ್ಲಿ ಶೀಘ್ರದಲ್ಲೇ ತೆರೆಯಲಾಗುವುದು : ಎಂ ಬಿ ಪಾಟೀಲ

ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಇನ್ನೊಂದು ಕಚೇರಿಯನ್ನು ಬೆಂಗಳೂರಿನಲ್ಲಿ ಶೀಘ್ರದಲ್ಲೇ ತೆರೆಯಲಾಗುವುದು : ಎಂ ಬಿ ಪಾಟೀಲ

ಬೆಂಗಳೂರು: ವಿಜಯಪುರದ ಬಿಎಲ್ ಡಿಇ ಶಿಕ್ಷಣ ಸಂಸ್ಥೆಗಳ ಸಮೂಹದ ಅಂಗವಾಗಿ ಸಕ್ರಿಯವಾಗಿರುವ ವಚನ ಪಿತಾಮಹ ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಇನ್ನೊಂದು ಕಚೇರಿಯನ್ನು ಬೆಂಗಳೂರಿನಲ್ಲಿ ಶೀಘ್ರದಲ್ಲೇ ತೆರೆಯಲಾಗುವುದು ಎಂದು ಸಂಸ್ಥೆಯ ಪೋಷಕರೂ ಆಗಿರುವ ಸಚಿವ ಎಂ‌ ಬಿ ಪಾಟೀಲ ತಿಳಿಸಿದ್ದಾರೆ.

ಈ ಸಂಬಂಧವಾಗಿ ಅವರು ಬುಧವಾರ ಇಲ್ಲಿನ ತಮ್ಮ‌ ನಿವಾಸದಲ್ಲಿ ಹಿರಿಯ ವಿದ್ವಾಂಸ ಗೊ.ರು.ಚನ್ನಬಸಪ್ಪ, ಕವಿ ಎಸ್ ಜಿ ಸಿದ್ದರಾಮಯ್ಯ, ಲೇಖಕ ಟಿ ಆರ್ ಚಂದ್ರಶೇಖರ, ಅಶೋಕ ದೊಮ್ಮಲೂರು ಅವರೊಂದಿಗೆ ಸುದೀರ್ಘ ಸಭೆ ನಡೆಸಿದರು.

ಉದ್ದೇಶಿತ ಕೇಂದ್ರದ ರೂಪುರೇಷೆಗಳ ಬಗ್ಗೆ ಒಂದು ಚೌಕಟ್ಟನ್ನು ಸಿದ್ಧಪಡಿಸುವ ಹೊಣೆಯನ್ನು ಅಶೋಕ ದೊಮ್ಮಲೂರು ಅವರಿಗೆ ವಹಿಸಲಾಗಿದೆ. ವಚನ ಸಾಹಿತ್ಯಕ್ಕೆ ಸಂಬಂಧಿಸಿದ ಹೆಚ್ಚಿನ ಸಂಶೋಧನೆ ಸೇರಿದಂತೆ ವಿವಿಧ ಯೋಜನೆಗಳನ್ನು ಈ ಕೇಂದ್ರದ ಮೂಲಕ ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ವಚನಗಳ ಅಧ್ಯಯನಕ್ಕೆ ಒಂದು ಶಾಸ್ತ್ರೀಯ ನೆಲೆಯನ್ನು ರೂಪಿಸಿದ ಹಿರಿಮೆ ಹಳಕಟ್ಟಿ ಅವರದಾಗಿದೆ. ಅವರು ಬಿಎಲ್ ಡಿಇ ಶಿಕ್ಷಣ ಸಂಸ್ಥೆಗಳ ಸ್ಥಾಪಕರಲ್ಲಿ ಒಬ್ಬರಾಗಿದ್ದಾರೆ. ಅವರ ಹೆಸರಿನಲ್ಲಿ ಇರುವ ಸಂಶೋಧನಾ ಕೇಂದ್ರವು ವಚನ ಸಾಹಿತ್ಯ ಕುರಿತು ಇದುವರೆಗೂ ಅರ್ಥಪೂರ್ಣ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿದೆ ಎಂದು ಪಾಟೀಲ ಹೇಳಿದ್ದಾರೆ