ಬೆಂಗಳೂರು: ಚಂದ್ರಯಾನ-3 ಯಶಸ್ಸಿಗಾಗಿ ಶ್ರಮಿಸಿದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಳಗಿನ ಜಾವ ನಗರಕ್ಕೆ ಆಗಮಿಸಿದ್ದರು. ನಗರದ ಇಸ್ರೋ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ವಿಜ್ಞಾನಿಗಳನ್ನು ಅಭಿನಂದಿಸಿ ಮಾತನಾಡಿದರು. ನಂತರ ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ನವದೆಹಲಿಗೆ ತೆರಳಿದರು. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಪರವಾಗಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರು ಸೇರಿದಂತೆ ಹಿರಿಯ ಅಧಿಕಾರಿಗಳು ಪ್ರಧಾನಿಗಳನ್ನು ಬೀಳ್ಕೊಟ್ಟರು.
ಪ್ರಧಾನಮಂತ್ರಿಗಳ ನಿರ್ಗಮನ
Previous articleಚಂದ್ರನಲ್ಲಿ ಶಿವಶಕ್ತಿ ಪಾಯಿಂಟ್: ಮೋದಿ
Next articleಹೋರಾಟಗಾರ ಜಿಗಣಿ ಶಂಕರ್ ನಿಧನ