Saturday, December 14, 2024
Homeಸುದ್ದಿರಾಜ್ಯಸಾಲದ ಹೊರೆ: ರೈತ ಆತ್ಮಹತ್ಯೆ

ಸಾಲದ ಹೊರೆ: ರೈತ ಆತ್ಮಹತ್ಯೆ

ವಿಜಯನಗರ: ಹೂವಿನಹಡಗಲಿ ತಾಲ್ಲೂಕಿನ ಹ್ಯಾರಡ ಗ್ರಾಮದ ರೈತ ಸಾಲಮನಿ ಮಹೇಶಪ್ಪ (49) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಪತ್ನಿ, ಪುತ್ರಿ, ಇಬ್ಬರು ಪುತ್ರರು ಇದ್ದಾರೆ. ರೈತ ರಾಣೇಬೆನ್ನೂರು ಎಚ್ ಡಿಎಫ್ ಸಿ ಬ್ಯಾಂಕಿನಲ್ಲಿ ತನ್ನ ಜಮೀನಿನ ಮೇಲೆ 8 ಲಕ್ಷ ರೂಪಾಯಿ ಕೃಷಿ ಸಾಲ ಪಡೆದಿದ್ದರು. ಮಳೆ ಕೊರತೆಯಿಂದ ಬೆಳೆ ಸಂಪೂರ್ಣ ಹಾನಿಗೀಡಾಗಿದ್ದರಿಂದ ಮನನೊಂದು ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಮೃತರ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕುರಿತು ಹಿರೇಹಡಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.