Saturday, December 14, 2024
Homeಬೆಂಗಳೂರು ವಿಭಾಗಬೆಂಗಳೂರು ನಗರಸಂಸದ ಪ್ರಜ್ವಲ್‌ ರೇವಣ್ಣ ಆಯ್ಕೆ ಅಸಿಂಧು

ಸಂಸದ ಪ್ರಜ್ವಲ್‌ ರೇವಣ್ಣ ಆಯ್ಕೆ ಅಸಿಂಧು

ಬೆಂಗಳೂರು: ಚುನಾವಣಾ ಅಕ್ರಮ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ 2019ರ ಲೋಕಸಭಾ ಚುನಾವಣೆಯಲ್ಲಿ ಸಂಸದರಾಗಿ ಆಯ್ಕೆಯಾಗಿರುವುದನ್ನು ಹೈಕೋರ್ಟ್‌ ಅಸಿಂಧುಗೊಳಿಸಿದೆ. ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಪ್ರಶ್ನಿಸಿ ಪರಾಜಿತ ಅಭ್ಯರ್ಥಿಗಳಾದ ಎ.ಮಂಜು ಮತ್ತು ಜಿ. ದೇವರಾಜೇಗೌಡ ಸಲ್ಲಿಸಿದ್ದ ಪ್ರತ್ಯೇಕ ಚುನಾವಣಾ ತಕರಾರು ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಕೆ.ನಟರಾಜನ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿದ್ದು ಅರ್ಜಿಯನ್ನು ಭಾಗಶಃ ಪುರಸ್ಕರಿಸಿದೆ. ಇದೇ ವೇಳೆ, ನನ್ನನ್ನು ವಿಜೇತ ಅಭ್ಯರ್ಥಿಯಾಗಿ ಘೋಷಣೆ ಮಾಡಬೇಕು ಎಂದು ಕೋರಿದ್ದ ಅರ್ಜಿದಾರ ಎ.ಮಂಜು ಅವರ ಮನವಿಯನ್ನು ನ್ಯಾಯಪೀಠ ತಿರಸ್ಕರಿಸಿದ್ದು, ‘ಎ.ಮಂಜು ಸಹಾ ಚುನಾವಣೆಯಲ್ಲಿ ಅಕ್ರಮ ನಡೆಸಿದ್ದು, ಅವರನ್ನು ವಿಜೇತ ಅಭ್ಯರ್ಥಿ ಎಂಬುದಾಗಿ ಘೋಷಣೆ ಮಾಡಲು ಸಾಧ್ಯವಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.