ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಟಿ.ಎಂ. ಹೊಸೂರು ಗೇಟ್ ಬಳಿ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಶನಿವಾರ ಸರಣಿ ಅಪಘಾತವಾಗಿದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರು ಸೇರಿ ನಾಲ್ಕು ಕಾರು ಜಖಂಗೊಂಡಿವೆ, ಒಂದು ಕಾರು ಹೊತ್ತಿ ಉರಿದಿದೆ.
ಬೆಂಗಳೂರು ಕಡೆಯಿಂದ ಮೈಸೂರು ಕಡೆಗೆ ತೆರಳುವಾಗ ವೋಕ್ಸ್ ವ್ಯಾಗನ್ ಕಾರಿಗೆ ಸಿಮೆಂಟ್ ಸಾಗಿಸುತ್ತಿ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮುಂದೆ ಚಲಿಸುತ್ತಿದ್ದ ನಾಲ್ಕು ಕಾರುಗಳು ಡಿಕ್ಕಿಯಾಗಿವೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಚಲಿಸುತ್ತಿದ್ದ ಕಾರಿಗೂ ಡಿಕ್ಕಿಯಾಗಿದೆ.
ಡಿಕ್ಕಿಯ ನಂತರ ವೋಕ್ಸ್‌ವ್ಯಾಗನ್ ಕಾರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾರಿಗೆ ಆವರಿಸಿಕೊಳ್ಳುವಷ್ಟರಲ್ಲಿ ಸ್ಥಳೀಯರು ಕಾರಿನಲ್ಲಿ ಇದ್ದವರನ್ನು ರಕ್ಷಿಸಿದ್ದಾರೆ. ಕಾರಿನಲ್ಲಿದ್ದ ಬೆಂಗಳೂರಿನ ನವ ದಂಪತಿ ಯಶವಂತ್- ಯಶಸ್ವಿನಿ ಹಾಗೂ ಚಾಲಕ ರಾಘವೇಂದ್ರ ಅಪಾಯದಿಂದ ಪಾರಾಗಿದ್ದಾರೆ.
ಶ್ರೀರಂಗಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.