Saturday, December 14, 2024
Homeಬೆಂಗಳೂರು ವಿಭಾಗಬೆಂಗಳೂರು ನಗರಶ್ರೀಗಂಧ ಮರ ಕಳವು ಆರೋಪಿಗಳ ಮೇಲೆ ಗುಂಡಿನ ದಾಳಿ: ಒಬ್ಬ ಸಾವು

ಶ್ರೀಗಂಧ ಮರ ಕಳವು ಆರೋಪಿಗಳ ಮೇಲೆ ಗುಂಡಿನ ದಾಳಿ: ಒಬ್ಬ ಸಾವು

ಆನೇಕಲ್: ಶ್ರೀಗಂಧ ಮರ ಕದಿಯಲು ಬಂದವರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿನ ದಾಳಿ ನಡೆಸಿದ್ದು, ಒಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಪರಾರಿಯಾಗಿದ್ದಾರೆ. ಬನ್ನೇರುಘಟ್ಟ ಕಲ್ಕೆರೆ ಸಮೀಪದ ವೀವರ್ಸ್ ಕಾಲೊನಿಯಲ್ಲಿ ಬುಧವಾರ ಮುಂಜಾನೆ 3.30 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ಮೂಲದ ತಿಮ್ಮರಾಯಪ್ಪ ಮೃತಪಟ್ಟವರು. ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ತಿರುಗುವ ವೇಳೆ ಮರ ಕಡಿಯುವ ಶಬ್ದ ಕೇಳಿ ಬಂದಿದೆ. ಶಬ್ದದ ಬೆನ್ನತ್ತಿ ಹೋದಾಗ ಇಬ್ಬರು ಶ್ರೀಗಂಧದ ಮರ ಕಡಿಯುತ್ತಿರುವುದು ಕಂಡಿದೆ. ಆರೋಪಿಗಳನ್ನು ಶರಣಾಗುವಂತೆ ಅರಣ್ಯ ಇಲಾಖೆ ಸಿಬ್ಬಂದಿ ಸೂಚಿಸಿದ್ದಾರೆ. ಆಗ ಇಬ್ಬರೂ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಫಾರೆಸ್ಟ್ ಗಾರ್ಡ್ ವಿನಯ್ ಕುಮಾರ್ ಗುಂಡು ಹಾರಿಸಿದ್ದಾರೆ. ಗುಂಡು ತಾಗಿ ತಿನಮರಯಪ್ಪ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಬಂದು ಪರಿಶೀಲನೆ ನಡೆಸಿದರು.