ಬೆಂಗಳೂರು: ತೆಲಂಗಾಣ ರಾಜ್ಯದ ಕುರುಬ ಸಮಾಜದ ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಸ್ಥಳೀಯ ಸಂಸ್ಥೆಗಳ ಚುನಾಯಿತ ಸಮಾಜದ ರಾಜ್ಯಾಧ್ಯಕ್ಷ ಯೆಗ್ಗೆ ಮಲ್ಲೇಶ್ ಮತ್ತು ಕರ್ನಾಟಕ ರಾಜ್ಯದ ಮಾಜಿ ಸಚಿವ ಹೆಚ್.ಎಂ.ರೇವಣ್ಣ ನೇತೃತ್ವದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತೆಲಂಗಾಣ ಕುರುಬ ಸಮಾಜದ ಬೃಹತ್ ಸಮಾವೇಶಕ್ಕೆ ಆಹ್ವಾನಿಸಿದರು.
ಅಕ್ಟೋಬರ್ ತಿಂಗಳ ಎರಡನೇ ವಾರದಲ್ಲಿ ತೆಲಂಗಾಣದಲ್ಲಿ ನಡೆಯುವ ಸಮಾವೇಶಕ್ಕೆ ತಾವು ಆಗಮಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಯೋಗಕ್ಕೆ ಭರವಸೆ ನೀಡಿದರು.ನಿಯೋಗದಲ್ಲಿ 50 ಕ್ಕೂ ಮಂದಿ ತೆಲಂಗಾಣ ಕುರುಬ ಸಮಾಜದ ಚುನಾಯಿತ ಪ್ರತಿನಿಧಿಗಳು ಇದ್ದರು.