Saturday, December 14, 2024
Homeಕರಾವಳಿ ಕರ್ನಾಟಕಉಡುಪಿಟಿಕೆಟ್ ಕೊಡಿಸುವುದಾಗಿ ಹಣ ಪಡೆದು ವಂಚನೆ: ಚೈತ್ರಾ ಕುಂದಾಪುರ ಪೊಲೀಸ್ ವಶಕ್ಕೆ

ಟಿಕೆಟ್ ಕೊಡಿಸುವುದಾಗಿ ಹಣ ಪಡೆದು ವಂಚನೆ: ಚೈತ್ರಾ ಕುಂದಾಪುರ ಪೊಲೀಸ್ ವಶಕ್ಕೆ

ಉಡುಪಿ: ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಗೆ 5 ಕೋಟಿ ರೂಪಾಯಿ ಪಡೆದು ವಂಚಿಸಿದ ಆರೋಪದಲ್ಲಿ ಚೈತ್ರಾ ಕುಂದಾಪುರ ಎಂಬವರನ್ನು ಸಿಸಿಬಿ ಪೊಲೀಸರು ವಶಕ್ಜೆ ತೆಗೆದುಕೊಂಡಿದ್ದಾರೆ.

ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಚತರ ಕುಂದಾಪುರ, ಗಗನ್ ಕಡೂರು, ಅಭಿನವ ಹಾಲಶ್ರೀ ಸ್ವಾಮೀಜಿ, ರಮೇಶ್, ನಾಯಕ್‌, ಧನರಾಜ್, ಶ್ರೀಕಾಂತ್, ಪ್ರಸಾದ್ ಬೈಂದೂರು ಎಂಬುವರು 5 ಕೋಟಿ ರೂಪಾಯಿ ವಂಚನೆ ಎಸಗಿದ್ದಾರೆ ಎಂದು ಬೆಂಗಳೂರಿನ ಬಂಡೆಪಾಳ್ಯ ಠಾಣೆಯಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಪ್ರಕರಣ ದಾಖಲಿಸಿದ್ದರು.

ಪ್ರಕರಣ ಸಂಬಂಧ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಉಡುಪಿಯಲ್ಲಿ ಚೈತ್ರಾ ಕುಂದಾಪುರ ಸೇರಿದಂತ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಚೈತ್ರಾ ಕುಂದಾಪುರ ಫೈರ್ ಬ್ರಾಂಡ್ ಭಾಷಣಗಾರ್ತಿ ಯಾಗಿದ್ದರು. ಕರ್ನಾಟಕದ ಮೂಲೆಮೂಲೆಗೆ ಹೋಗಿ ಹಿಂದುತ್ವದ ಪರವಾಗಿ, ಬಿಜೆಪಿ ಪರವಾಗಿ ಭಾಷಣ ಮಾಡುತ್ತಿದ್ದರು.