ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ನಗರದ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್ ಅವರ ನಿವಾಸದಲ್ಲಿ ವರಮಹಾಲಕ್ಷ್ಮಿ ಹಬ್ಬ ಮತ್ತು ರಕ್ಷಾಬಂಧನದ ಅಂಗವಾಗಿ ಸಾಧಕರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಕಾಂಗ್ರೆಸ್ಸಿನ ಮಹಿಳಾ ಘಟಕದ ಅಧ್ಯಕ್ಷ ಶ್ರೀಮತಿ ಅನಿತಾಬಾಯಿ ಅವರ ನೇತೃತ್ವದಲ್ಲಿ ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪನವರು, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್, ಉಪ ವಿಭಾಗ ಅಧಿಕಾರಿ ಶ್ರೀಮತಿ ದುರ್ಗಾ ಶ್ರೀ, ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀಮತಿ ರೇಣುಕಾ ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ ಅವರ ಧರ್ಮ ಪತ್ನಿ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ ಅವರು ಮಹಿಳಾ ಕಾಂಗ್ರೆಸ್ಸಿನ ಎಲ್ಲಾ ಪದಾಧಿಕಾರಿಗಳನ್ನು ಸತ್ಕರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ ಹಾಗೂ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.