Saturday, December 14, 2024
Homeಕರಾವಳಿ ಕರ್ನಾಟಕಉಡುಪಿಯಕ್ಷಗಾನ ಕಲಾವಿದ ರಾಜೇಂದ್ರ ಗಾಣಿಗ ನಿಧನ

ಯಕ್ಷಗಾನ ಕಲಾವಿದ ರಾಜೇಂದ್ರ ಗಾಣಿಗ ನಿಧನ

ಉಡುಪಿ: ಎರಡೂವರೆ ದಶಕಗಳ ಕಾಲ ವಿವಿಧ ಮೇಳಗಳಲ್ಲಿ ಯಕ್ಷಗಾನ ಕಲಾವಿದರಾಗಿ ಕಲಾಸೇವೆ ಮಾಡಿದ್ದ ಯುವ ಕಲಾವಿದ ಹೆರಂಜಾಲು ರಾಜೇಂದ್ರ ಗಾಣಿಗ (41) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು.

ಮಾರಣಕಟ್ಟೆ, ಹಾಲಾಡಿ, ಸೌಕೂರು, ನೀಲಾವರ ಹಾಗೂ ಮಂದಾರ್ತಿ ಮೇಳದಲ್ಲಿ ಪುರುಷ ವೇಷಧಾರಿಯಾಗಿ ಪ್ರದರ್ಶನ ನೀಡಿದ್ದರು. ಅವಿವಾಹಿತರಾಗಿದ್ದ ರಾಜೇಂದ್ರ ಗಾಣಿಗ ಅವರಿಗೆ ತಾಯಿ ಇದ್ದಾರೆ.